ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ
156 ನೇ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿವರ ಇಂತಿವೆ.
ಪ್ರೌಢಶಾಲಾ ವಿಭಾಗ: ಕುಂದಾಪುರ ತಾಲೂಕು ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿ ಶ್ರೀನಿತಾ ಪ್ರಥಮ, ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿ ಶಿವಾನಿ ದ್ವಿತೀಯ ಹಾಗೂ ಕಾರ್ಕಳ ಕಾಬೆಟ್ಟು ಎಸ್.ವಿ.ಟಿ ಆಂಗಲ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅಸ್ಮಿತಾ ತೃತೀಯ ಸ್ಥಾನ ಪಡೆದಿರುತ್ತಾರೆ.
ಪದವಿ ಪೂರ್ವ ಶಿಕ್ಷಣ ವಿಭಾಗ: ಕಾರ್ಕಳ ತಾಲೂಕು ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಸ್ನೇಹ ಪ್ರಥಮ, ಕುಂದಾಪುರ ಸಂತ ಮೇರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ವಿದ್ಯಾಶ್ರೀ ದ್ವಿತೀಯ ಹಾಗೂ ಕುಂದಾಪುರ ತಾಲೂಕು ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಸುಶ್ಮಿತಾ ಆರ್ ನಾಯ್ಕ್ ತೃತೀಯ ಸ್ಥಾನ ಪಡೆದಿರುತ್ತಾರೆ.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ
ಅಧ್ಯಯನ ಕೇಂದ್ರದ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸವಿತಾ ಎಸ್.ಎಂ ಪ್ರಥಮ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂ.ಎ ಇತಿಹಾಸ ವಿದ್ಯಾರ್ಥಿನಿ ಅಪ್ಸನಾ ದ್ವಿತೀಯ ಹಾಗೂ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಅಶ್ವಿನಿ ಎನ್.ಡಬ್ಲ್ಯೂ ತೃತೀಯ ಸ್ಥಾನ ಪಡೆದಿದ್ದು, ಸದ್ರಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ನಡೆಯಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ನಗದು ಬಹುಮಾನ ವಿತರಿಸಲಾಗುವುದು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















