ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯರಿಗೆ ವಿಶ್ವಕರ್ಮ ಶ್ರೀ ಪ್ರಶಸ್ತಿ

ಮಂಗಳೂರು: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್
ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯರಿಗೆ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿಶ್ವಕರ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಾಸನ ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ವಿಭೂಷಿತ ಶಿವಸುಜ್ಞಾನತೀರ್ಥ ಮಹಾಸ್ವಾಮಿಗಳು ಹಾಗೂ ಪರಸಮಯ ಕೋಲರಿನಾಥರ್ ಅಧೀನಂ ಪೀಠಾಧಿಪತಿ ಶ್ರೀ ಸ್ವಾಮಿ ಬುದ್ಧಾತ್ಮಾನಂದ ಸರಸ್ವತಿ ಅವರ ಉಪಸ್ಥಿತಿಯಲ್ಲಿ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ನಾಡೋಜ ಡಾ.ಬಿ.ಎಂ.ಉಮೇಶ್ ಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವೈದ್ಯ ಸಾಹಿತಿ ಡಾ.ಸಿ.ಆರ್ ಚಂದ್ರಶೇಖರ್, ಶಿಲ್ಪಿ ಅರುಣ್ ಯೋಗಿರಾಜ್ ಮೊದಲಾದವರು ಉಪಸ್ಥಿತರಿದ್ದರು.