ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಉಡುಪಿ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.


















