ಉಡುಪಿ: ಉಡುಪಿ – ಉಚ್ಚಿಲ ದಸರಾ 2025ರ ಪ್ರಯುಕ್ತ ಬೃಹತ್ ಶೋಭಾಯತ್ರೆ ಮೆರವಣಿಗೆಯು ಅ. 2ರಂದು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆ ಆಗುವ ಸಾಧ್ಯತೆ ಇರುವುದರಿಂದ ಉಡುಪಿ- ಮಂಗಳೂರು ಮಾರ್ಗವಾಗಿ ಸಂಚರಿಸುವ ಘನ ವಾಹನಗಳನ್ನು ಅಂದು ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ -ಶಿರ್ವ-ಬೆಲ್ಮಣ್-ಪಡುಬಿದ್ರಿ ಮಾರ್ಗವಾಗಿ ಸಂಚರಿಸಲು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.
ಪರ್ಯಾಯ ಮಾರ್ಗ
ಉಡುಪಿ ಕಡೆಯಿಂದ ಬಜೆ ಏರ್ ಪೋರ್ಟ್ ಹೋಗುವ ವಾಹನಗಳು ಕಟಪಾಡಿ- ಶಿರ್ವ-ಬೆಮ್ಮಣ್ -ಮುಂಡೂರು ಮಾರ್ಗವಾಗಿ ಸಂಚರಿಸುವುದು. ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್ ಬೇಯಲ್ಲಿ ನಿಲ್ಲಿಸಿ ಅನಂತರ ಸಂಚಾರ ಮುಂದುವರಿಸುವುದು. ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ ಗಳು ರಾತ್ರಿ 9 ಗಂಟೆಯ ಅನಂತರ ಉಡುಪಿಯಿಂದ ಸಂಚರಿಸುವುದು.
ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5ರಿಂದ ರಾತ್ರಿ 10 ಗಂಟೆ ಮಧ್ಯೆ ಸಂಚರಿಸಬಾರದಾಗಿ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಪಾರ್ಕಿಂಗ್‌ಗೆ ಎಲ್ಲೆಲ್ಲಿ ಅವಕಾಶಹೊಂಗಿರಣಅ. 2ರಂದು ದೇವಸ್ಥಾನಕ್ಕೆ ಬರುವರರಿಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಂಗಳೂರು ಕಡೆಯಿಂದ ಬರುವ ಭಕ್ತರು ತಮ್ಮ ವಾಹನಗಳನ್ನು ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಎರ್ಮಾಳು ಜನಾರ್ದನ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರಿಸಬಹುದಾಗಿದ್ದು, ಉಡುಪಿ ಕಡೆಯಿಂದ ಬರುವ ಭಕ್ತರಿಗೆ ಮಹಾಲಕ್ಷ್ಮೀ ಶಾಲಾ ಮೈದಾನ, ಮೊಗವೀರ ಭವನದ ಬಳಿ, ದೇವಸ್ಥಾನದ ಪರಿಸರ, ಎರ್ಮಾಳು ಜನಾರ್ದನ ದೇವಸ್ಥಾನದ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಕಾಪು ಬೀಚ್‌ಗೆ ಬರುವರಿಗೆ ಕಾಪು ಬೀಚ್‌ನಲ್ಲಿ ನಡೆಯುವ ವಿಸರ್ಜನೆ ಮತ್ತು ಜಲಸ್ತಂಭನದಲ್ಲಿ ಪಾಲ್ಗೊಳಲು ಮಂಗಳೂರು ಕಡೆಯಿಂದ ಬರುವವರಿಗೆ ರಾ.ಹೆ. 66ರ ಮೂಳೂರು ಮತ್ತು ಕೊಪ್ಪಲಂಗಡಿ ಬಳಿ, ಕರಾವಳಿ ಮೀನುಗಾರಿಕಾ ರಸ್ತೆ ಮತ್ತು ಬೀಚ್ ರಸ್ತೆಯಲ್ಲಿ ಬರುವವರು ಮೂಳೂರು ಸಾಯಿರಾಧಾ ರೆಸಾರ್ಟ್ ಬಳಿ, ಉಡುಪಿ-ಮಲ್ಪೆ- ಪಡುಕೆರೆಯಿಂದ ಬರುವವರಿಗೆ ಪೊಲಿಪು ಶಾಲಾ ಮೈದಾನ, ಕೈಪುಂಜಾಲು ಶಾಲಾ ಮೈದಾನ, ಕಾಪು ಬೀಚ್ ಪಾಕಿಂಗ್, ಕೋಟ್ಯಾನ್‌ಕಾರ್ ಮೂಲಸ್ಥಾನದ ಬಳಿ ವಾಹನ ಪಾರ್ಕಿಂಗ್‌ಗೆ ಅವಕಾಶ ಮಾಡಿಕೊಡಲಾಗಿದೆ.
ಶೋಭಾಯಾತ್ರೆ ಸಾಗುವ ಮಾರ್ಗ ಹೀಗಿರಲಿದೆಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಿಂದ 5 ಗಂಟೆಗೆ ಹೊರಡುವ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಮಂಗಳೂರು ರಸ್ತೆಯಲ್ಲಿ ಎರ್ಮಾಳು ಮಸೀದಿವರೆಗೆ ಸಾಗಿ, ಅಲ್ಲಿ ರಾ.ಹೆ. 66ರಲ್ಲಿ ತಿರುಗಿ ಮಂಗಳೂರು-ಉಡುಪಿ ರಸ್ತೆ ಮೂಲಕವಾಗಿ ಉಚ್ಚಿಲ-ಮೂಳೂರು ಮಾರ್ಗವಾಗಿ ಕೊಪ್ಪಲಂಗಡಿಗೆ ಬರಲಿದೆ. ಅಲ್ಲಿಂದ ಕಾಪು ಬೀಚ್ ರಸ್ತೆಯಲ್ಲಿ ಸಂಚರಿಸಿ ರಾತ್ರಿ 10.30ಕ್ಕೆ ಕಾಪು ಲೈಟ್‌ಹೌಸ್ ಬಳಿಯ ಜಲಸ್ತಂಭನ ಪ್ರದೇಶಕ್ಕೆ ತಲುಪಲಿದೆ. ಬಳಿಕ ಸಾಮೂಹಿಕ ಮಂಗಳಾರತಿ, ಗಂಗಾರತಿಯ ಬಳಿಕ ಸಮುದ್ರ ಮಧ್ಯಕ್ಕೆ ಕೊಂಡೊಯ್ದು 11 ಗಂಟೆಯ ವೇಳೆಗೆ ಜಲಸ್ತಂಭನಗೊಳಿಸಲಾಗುತ್ತದೆ.


















