ಉಡುಪಿ: ಕಾರ್ಕಳ ಮಾರಿಗುಡಿ ದೇವಸ್ಥಾನದ ಬಳಿಯ ಪ್ರೈಮ್ ಸಿಟಿ ಸೆಂಟರ್ ನಲ್ಲಿ ಆರಂಭಗೊಂಡ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಕಚೇರಿಯ ಉದ್ಘಾಟನೆ ಸಮಾರಂಭವು ಇದೇ ಅ.7ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯಾದ್ಯಂತ ನೆಲೆಸಿರುವ ಕ್ಷೌರಿಕರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ 2007ರಲ್ಲಿ ಸವಿತಾ ಸಮಾಜ ವಿವಿದ್ಧೋದ್ದೇಶ ಸೌಹಾರ್ದ ಸಹಕಾರಿ ಸಂಘವನ್ನು ಪ್ರಾರಂಭಿಸಲಾಯಿತು.
ಸಂಘವು ಪ್ರಸ್ತುತ 5 ಶಾಖೆಗಳನ್ನು ಹೊಂದಿದ್ದು, ಅಂಬಲಪಾಡಿ ಉಡುಪಿಯಲ್ಲಿ ಪ್ರಧಾನ ಕಚೇರಿ ಹಾಗೂ ಕಾರ್ಕಳ, ಕುಂದಾಪುರ ಮತ್ತು ಕಾಪು, ಬ್ರಹ್ಮಾವರದಲ್ಲಿ ಶಾಖೆಗಳನ್ನು ಹೊಂದಿದೆ. ಈ ಶಾಖೆಗಳಲ್ಲಿ ಬ್ಯಾಂಕಿಗ್ ಸೌಲಭ್ಯ ಇರುವ ಜೊತೆಗೆ ಸೆಲೂನ್ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಇತ್ತೀಚಿಗೆ ಎರಡು ಅಂಗ ಸಂಸ್ಥೆಗಳಾದ ಟೆಶೂ, ಪೇಪರ್ ಉತ್ಪಾದನ ಘಟಕ ಅಮ್ಮುಂಜೆ ಮತ್ತು ಸವಿತಾ ಡಯಾಗೋಸ್ಟಿಕ್ ಸೆಂಟರ್ ಅಂಬಲಪಾಡಿ ಆರಂಭಿಸಲಾಗಿದ್ದು ಇದು ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಾಲತಿ ಅಶೋಕ್ ಭಂಡಾರಿ, ಉಪಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ನಿರ್ದೇಶಕರಾದ ಸದಾಶಿವ ಬಂಗೇರ ಕುರ್ಕಾಲು, ವಿಶ್ವನಾಥ್ ಭಂಡಾರಿ ನಿಂಜೂರು, ನಾಗೇಶ್ ಭಂಡಾರಿ ಬಜಗೋಳಿ, ರಾಜು ಸಿ. ಭಂಡಾರಿ ಕಿನ್ನಿಮುಲ್ಕಿ ಉಪಸ್ಥಿತರಿದ್ದರು.


















