ಉಡುಪಿ ಅಕ್ಟೋಬರ್ ೦4: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ನಡೆಯುವ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ಉಡುಪಿ ತಾಲೂಕಿನ ಒಳಕಾಡು ಸ.ಪ್ರೌ.ಶಾಲೆಯ ಶಿಕ್ಷಕಿ ಸುರೇಖ, ಒಳಕಾಡು ಸ.ಪ್ರೌ.ಶಾಲೆಯ ಶಿಕ್ಷಕಿ ರತ್ನ, ಉದ್ಯಾವರ ಸ.ಪ.ಪೂ.ಕಾಲೇಜು ಸಹ ಶಿಕ್ಷಕಿ ಪ್ರಭಾ ಬಿ ಇವರನ್ನು ಗಣತಿದಾರರಾಗಿ ನೇಮಿಸಲಾಗಿದ್ದು, ಶಿಕ್ಷಕರು ನೇಮಕಾತಿ ಆದೇಶವನ್ನು ಸ್ವೀಕರಿಸಿರುವುದಿಲ್ಲ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿದರೂ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿರುತ್ತಾರೆ.
ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರೂ ಇದುವರೆಗೂ ಸಮಜಾಯಿಷಿ ನೀಡಿರುವುದಿಲ್ಲವಾದ್ದರಿಂದ ಸಮೀಕ್ಷೆದಾರರನ್ನು ಅ.೪ ರಂದು ಅಮಾನತ್ತಿನಲ್ಲಿ ಇರಿಸಿ ಆದೇಶ ಹೊರಡಿಸಲಾಗಿದೆ. ಈ ರೀತಿ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷೆದಾರರು ನಿರ್ಲಕ್ಷö್ಯ ತೋರಿದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.


















