ಉಡುಪಿ:ಅ.17ರಂದು ಮೈಸೂರು ಬೃಹತ್ ಉದ್ಯೋಗ ಮೇಳ-2025

ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರಪಾಲಿಕೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶವನ್ನು ನೀಡುವ ಸಲುವಾಗಿ ಅ.17 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಮೈಸೂರು ಬೃಹತ್ ಉದ್ಯೋಗ ಮೇಳ-2025 ಮತ್ತು ಯುವ ಸಮೃದ್ಧಿ ಸಮ್ಮೇಳವನ್ನು ಆಯೋಜಿಸಲಾಗಿದ್ದು, ಎಲ್ಲಾ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು https://udyogamela.ksdckarnataka.com/ ವೆಬ್‌ಸೈಟ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ 0820-2574204 ಅಥವಾ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.