ಉಡುಪಿ:2025-26 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅ.9 ರಿಂದ 16 ರವರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ udupi.nic.in ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಸಂಘದ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


















