ಬ್ರಹ್ಮಾವರ: ಎಸ್ ಎಂ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ.

ಬ್ರಹ್ಮಾವರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಉಡುಪಿ ಹಾಗೂ ಜನತಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಎಸ್ ಎಂ ಎಸ್ ಪದವಿಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳಾದ ಶರಣ್ 97kg, ಸುಕನ್ಯಾ 72kg, ಧನ್ವಿತಾ 68kg, ಅನನ್ಯ 62kg, ಪ್ರಜ್ಞಾ 59kg ಹಾಗೂ ಮಂದಾರ 55kg ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಂದ್ರ 57kg, ಮೆರಿಲ್ 50kg ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಶಶಿ 79kg, ಶ್ರೀ ಅಕ್ಷ 57kg ವಿಭಾಗದಲ್ಲಿ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗಳಿಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶುಭಾಶಯ ಕೋರಿದ್ದಾರೆ.