14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 9 ಮಂದಿಯಿಂದ ಅತ್ಯಾಚಾರ: ಐವರ ಬಂಧನ, ಇನ್ನುಳಿದ ಆರೋಪಿಗಳಿಗೆ ಶೋಧ!

ಜಾರ್ಖಂಡ್​ನ ರಾಂಚಿಯ ರತು ಪ್ರದೇಶದಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಒಂಬತ್ತು ಮಂದಿ ಪುರುಷರು ಅತ್ಯಾಚಾರ ಮಾಡಿದ ಘಟನೆ ನಡೆದಿದ್ದು, ಅದರಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೋಮವಾರ(ಅ. 13) ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ(ಅ. 12) ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಪುಷ್ಕರ್, ಸೋಮವಾರ ಪೊಲೀಸರು ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ. ಇತರ ನಾಲ್ವರು ಆರೋಪಿಗಳನ್ನು ಹಿಡಿಯಲು ಶೋಧ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.