ಉಡುಪಿ:ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಶನಿವಾರ ಕಾಪು ತಾಲೂಕು ಬೆಳಪು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರಕಾರಿ ಸ್ನಾತಕೋತ್ತರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


















