ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು, ಉಡುಪಿ ಜಿಲ್ಲೆಯ ಸುಮಾರು ತಾಲೂಕುಗಳಲ್ಲಿಯೂ ಸಮೀಕ್ಷೆ ಪೂರ್ಣಗೊಂಡಿರುತ್ತದೆ.
ಸಮೀಕ್ಷೆ ಬಾಕಿಯಿರುವ ಸಾರ್ವಜನಿಕರು ರಾಜ್ಯ ಮಟ್ಟದ ಸಹಾಯವಾಣಿ ಸಂಖ್ಯೆ: 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ತಾಲೂಕು ಮಟ್ಟದ ಸಹಾಯವಾಣಿ ಸಂಖ್ಯೆ: 0820-2520739, ಬೈಂದೂರು/ಕುಂದಾಪುರ ತಾಲೂಕು ಮೊ.ನಂ: 9972294198 ಮತ್ತು ಕಾರ್ಕಳ-ಹೆಬ್ರಿ ತಾಲೂಕು ಸಹಾಯವಾಣಿ ಸಂಖ್ಯೆ: 08258-298610 ಗೆ ಕರೆಮಾಡುವ ಮೂಲಕ ಅಥವಾ ತಮ್ಮ ಸ್ಥಳೀಯ ಪಂಚಾಯತ್/ಪುರಸಭೆ/ನಗರಸಭೆ/ಪಟ್ಟಣ ಪಂಚಾಯತ್ ಗೆ ತೆರಳಿ ಅಥವಾ ತಮ್ಮ ಮೊಬೈಲ್/ಲ್ಯಾಪ್ ಟಾಪ್ ನಲ್ಲಿ https://kscbcselfdeclaration.karnataka.gov.in/ ಲಿಂಕ್ ಮೂಲಕ ಅಕ್ಟೋಬರ್ 31ರ ಒಳಗಾಗಿ ಸಮೀಕ್ಷೆಯನ್ನು ಪೂರ್ಣಗೊಳಿಸಿ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಂಪೂರ್ಣಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















