ಕಾರ್ಕಳ ಕ್ರೈ ಸ್ಟ್ಕಿಂಗ್: ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಪೂರ್ಣಿಮಾ ಪ್ರಭುಗೆ ಕಂಚಿನಪದಕ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ,
ವಿಜಯಪುರ ಜಿಲ್ಲೆ ಹಾಗೂ ಹೆಚ್.ಜಿ ಪ.ಪೂ ಕಾಲೇಜು ಸಿಂದಗಿ ಇವರ
ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ
ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ
ಕ್ರೈ ಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ
ವಿದ್ಯಾರ್ಥಿನಿ ಪೂರ್ಣಿಮ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಕು.ಲಾವಣ್ಯ ಶೆಟ್ಟಿ ವಿದ್ಯಾರ್ಥಿನಿಗೆ ತರಬೇತಿ ನೀಡಿದ್ದರು.