ಉಡುಪಿ: ಉಡುಪಿಯ ಉದ್ಯಾವರದ ವಿಜಯ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡಿರುವ ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ ನ. 2ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮಂಜುನಾಥ್ ಮಣಿಪಾಲ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ರೇವಿಯರ್ ಕ್ಯಾಥಲಿಕ್ ಚರ್ಚ್ ಸಭಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೂತನ ಸಂಘವನ್ನು ಉದ್ಘಾಟಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ರಘುಪತಿ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಜಿಲ್ಲಾ ಸಹಕಾರ ಇಲಾಖೆಯ ಉಪನಿಬಂಧಕರಾದ ಲಾವಣ್ಯ ಕೆ.ಆರ್., ಉಡುಪಿ ಉಪವಿಭಾಗದ ಕಾಮರ್ರಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೊಲಿಕ್ ಚರ್ಚ್ ನ ಧರ್ಮಗುರು ಫ್ರಾನ್ಸಿಸ್ ಅನಿಲ್ ಡಿಸೋಜ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ಬೆಂಗಳೂರು ನಿರ್ದೇಶಕ ಮಂಜುನಾಥ್ ಎಸ್.ಕೆ., ಅಧಿಕಾರಿ ವಿಜಯ್ ಬಿ.ಎಸ್., ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಉದ್ಯಮಿ ವೈ. ಸುಕುಮಾರ್ ಪಡುಬಿದ್ರಿ, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಉದ್ಯಮಿ ಯೋಗೀಶ್ ವಿ. ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಸ್ಥಾಪಕಾಧ್ಯಕ್ಷ ಪ್ರಭಾಕರ್ ಕೆ., ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಚೇರ್ ಮ್ಯಾನ್ ವಿಲ್ಸನ್ ಅಂಚನ್, ಕ್ಲಾಸಿಕ್ ಆಟೊಮೊಬೈಲ್ಸ್ ಆಡಳಿತ ನಿರ್ದೇಶಕ ಸಂತೋಷ್ ಕುಮಾರ್, ಉದ್ಯಮಿ ವಿಲ್ಸನ್ ರಾಜ್ ಕುಮಾರ್ ಉದ್ಯಾವರ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ, ಉದ್ಯಮಿ ದೀಪಕ್ ಕುಮಾರ್ ಎರ್ಮಾಳ್, ಪಿ ಓನ್ ಡ್ ವೆಹಿಕಲ್ ಡೀಲರ್ಸ್ ಎಸೋಸಿಯೇಶನ್ ಅಧ್ಯಕ್ಷ ಅಶ್ರಫ್, ಉದ್ಯಾವರ ಗ್ರಾ.ಪಂ. ಅಧ್ಯಕ್ಷೆ ಮಾಲತಿ ಸಾಲ್ಯಾನ್, ಸದಸ್ಯ ರಿಯಾಜ್ ಪಳ್ಳಿ, ಸಂಗಮ ಸೇವಾ ಸಹಕಾರ ಸಂಘ ಸಂಪಿಗೆನಗರ ಉದ್ಯಾವರ ಅಧ್ಯಕ್ಷ ಗಣೇಶ್ ಕುಮಾರ್, ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಚೇರ್ ಮ್ಯಾನ್ ದಿವಾಕರ ಎಮ್., ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ದಿನಕರ್ ಕುಲಾಲ್, ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ ಮಂಗಲೂರು ಅಧ್ಯಕ್ಷ ಎ. ಜನಾರ್ದನ, ನಿರ್ದೇಶಕ ಪುಂಡಲೀಕ ಸುವರ್ಣ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು, ಕೋಶಾಧಿಕಾರಿ ಸಂತೋಷ್ ಕುಮಾರ್, ಕುಂದಾಪುರ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ನಾರಾಯಣ ಆಚಾರ್ಯ, ಬ್ರಹ್ಮಾವರ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಕಾರ್ಕಳ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಶಂಕರ್ ಶೆಟ್ಟಿಗಾರ್, ಬೈಂದೂರು ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕೃಷ್ಣಯ್ಯ ಮಡ್ಡೋಡಿ, ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿರಲಿದ್ದಾರೆ. ಆರಂಭ ವರ್ಷದ ಪ್ರಯುಕ್ತ ಠೇವಣಿಗಳ ಮೇಲೆ ಆಕರ್ಷಕ ಬಡ್ಡಿದರವನ್ನು ನೀಡಲಾಗುತ್ತದೆ. 1 ವರ್ಷದ ಅವಧಿಯ ಠೇವಣಿಗೆ ಶೇ.10, 5 ವರ್ಷಗಳ ವಿಶೇಷ ಠೇವಣಿಗೆ ಶೇ.11 ಹಾಗೂ ಹಿರಿಯ ನಾಗರಿಕರಿಗೆ ಶೇ.0.5 ಹೆಚ್ಚುವರಿ ಬಡ್ಡಿದರ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ರಾಜೇಶ್ ಎಸ್. ಜತ್ತನ್, ನಿರ್ದೇಶಕರಾದ ರೋಷನ್ ಬಿ. ಕರ್ಕಡ ಕಾಪು, ಎಸ್.ಜಿ. ಕೃಷ್ಣ ಕಟಪಾಡಿ, ವಿನಯ ಕುಮಾರ್ ಕಲ್ಯಾಡಿ ಉಪಸ್ಥಿತರಿದ್ದರು


















