ಹೆಬ್ರಿಯ ಎಸ್.ಆರ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾನಿಕಾ ಎಂ ಇವರು, ರಾಮನಗರದಲ್ಲಿ ನಡೆಯುವ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿನಿಯರ, ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿನಿಯನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ್ ಶೆಟ್ಟಿ ಮತ್ತು ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.


















