ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನೆ.

ಉಡುಪಿ: ಸಹಕಾರಿ ಸಂಸ್ಥೆಯನ್ನು ಹುಟ್ಟು ಹಾಕುವುದು ಸುಲಭವಲ್ಲ, ಅದನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಿಕೊಂಡು ಹೋಗಲು ಎಲ್ಲರ ಸಹಕಾರ ಅಗತ್ಯ. ಈ ಸಂಸ್ಥೆಯು ಶೀಘ್ರವೇ ಅಭಿವೃದ್ಧಿಯನ್ನು ಹೊಂದಿ ಜನರಿಗೆ ಸೇವೆ ನೀಡುವಂತಹ ಸಂಸ್ಥೆಯಾಗಿ ಬೆಳೆಯಲಿ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಲದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾರೈಸಿದರು.
ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೊಲಿಕ್ ಚರ್ಚ್ ಸಭಾಂಗಣದಲ್ಲಿ ಭಾನುವಾರ ನಡೆದ ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭದ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರೇಜ್ ಮಾಲೀಕರ ಮತ್ತು ಕಾರ್ಮಿಕ ಸಂಘ ಸದೃಢವಾಗಿದ್ದು, ಆದಷ್ಟು ಬೇಗ ಸ್ವಂತ ಕಟ್ಟಡ ಕಟ್ಟುವುದರ ಜೊತೆಗೆ 25 ಶಾಖೆಗಳನ್ನು ಸ್ಥಾಪಿಸುವ ಶಕ್ತಿಯನ್ನು ಹೊಂದಿದೆ ಎಂದರು.


ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಗ್ರಾಹಕರಿಗೆ ಸಮರ್ಪಣಾ ಮನೋಭಾವದಿಂದ ನಗುಮುಗದ ಸೇವೆಯನ್ನು ನೀಡಿ ವಿಶ್ವಾಸ, ನಂಬಿಕೆಯಿಂದ ವ್ಯವಹಾರ ಮಾಡಿಕೊಂಡು ಮುನ್ನಡೆದರೆ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಬೆಳೆಯಲು ಸಾಧ್ಯವಿದೆ. ಗ್ಯಾರೇಜ್ ಮಾಲೀಕರು ಹಾಗೂ ಕಾರ್ಮಿಕರು ಸಂಘಟಿತರಾಗಿ ಮುನ್ನಡೆದರೆ ಸಂಘಕ್ಕೆ ಆರ್ಥಿಕ ಮತ್ತು ಸಂಘಟನಾ ಶಕ್ತಿ ತುಂಬಲು ಸಾಧ್ಯವಿದೆ. ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸಮಾಜಕ್ಕೆ ಒಳಿತಾಗಲಿದೆ ಎಂದು ಹಾರೈಸಿದರು.
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಆರೋಗ್ಯದ ಬಗ್ಗೆ ವೈದ್ಯರು ಯಾವ ರೀತಿಯ ಸಲಹೆ ಸೂಚನೆಯನ್ನು ನೀಡುತ್ತಾರೆಯೋ ಅದೇ ರೀತಿಯಲ್ಲಿ ಗ್ಯಾರೇಜ್ ನವರು ಕೂಡ ವಾಹನಗಳ ಬಗ್ಗೆ ಸಲಹೆ ಸೂಚನೆ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ರಾಜ್ಯಕ್ಕೆ ಮಾದರಿ ಎಂಬಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾರೇಜ್ ಮಾಲಕರು ಕಾರ್ಮಿಕರನ್ನು ಒಗ್ಗೂಡಿಸಿಕೊಂಡು ಸಂಘಟನೆ ಕಟ್ಟಿಕೊಂಡಿದ್ದಾರೆ. ತಮ್ಮ ವೃತ್ತಿಗೆ ಯಾವುದಾದರೂ ತೊಂದರೆ ಎದುರಾದಾಗ ಹೋರಾಟ ಮಾಡಲು ಸಂಘಟನೆಯ ಅವಶ್ಯಕತೆ ಇದೆ ಎಂದರು.
ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ್ ಮಣಿಪಾಲ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ, ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಕ್ಯಾಥೊಲಿಕ್ ಚರ್ಚ್ ನ ಧರ್ಮಗುರು ಫ್ರಾನ್ಸಿಸ್ ಅನಿಲ್ ಡಿಸೋಜ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ್ ಎಸ್.ಕೆ., ಅಧಿಕಾರಿ ವಿಜಯ್ ಬಿ.ಎಸ್., ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಉದ್ಯಮಿ ವೈ. ಸುಕುಮಾ‌ರ್ ಪಡುಬಿದ್ರಿ, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಉದ್ಯಮಿ ಯೋಗೀಶ್ ವಿ. ಶೆಟ್ಟಿ, ಉಡುಪಿ ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಸ್ಥಾಪಕಾಧ್ಯಕ್ಷ ಪ್ರಭಾಕ‌ರ್ ಕೆ., ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಚೇರ್ ಮ್ಯಾನ್ ವಿಲ್ಸನ್ ಅಂಚನ್, ಕ್ಲಾಸಿಕ್ ಆಟೊಮೊಬೈಲ್ಸ್ ಆಡಳಿತ ನಿರ್ದೇಶಕ ಸಂತೋಷ್ ಕುಮಾರ್, ಉದ್ಯಮಿ ವಿಲ್ಸನ್ ರಾಜ್ ಕುಮಾ‌ರ್ ಉದ್ಯಾವರ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ, ಉದ್ಯಮಿ ದೀಪಕ್ ಕುಮಾರ್ ಎರ್ಮಾಳ್, ಪಿ ಓನ್ ಡ್ ವೆಹಿಕಲ್ ಡೀಲರ್ಸ್ ಎಸೋಸಿಯೇಶನ್ ಅಧ್ಯಕ್ಷ ಅಶ್ರಫ್, ಉದ್ಯಾವರ ಗ್ರಾ.ಪಂ. ಅಧ್ಯಕ್ಷೆ ಮಾಲತಿ ಸಾಲ್ಯಾನ್, ಸದಸ್ಯ ರಿಯಾಜ್ ಪಳ್ಳಿ, ಸಂಗಮ ಸೇವಾ ಸಹಕಾರ ಸಂಘ ಸಂಪಿಗೆನಗರ ಉದ್ಯಾವರ ಅಧ್ಯಕ್ಷ ಗಣೇಶ್ ಕುಮಾರ್, ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಚೇರ್ ಮ್ಯಾನ್ ದಿವಾಕರ ಎಮ್., ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ದಿನಕರ್ ಕುಲಾಲ್, ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ ಮಂಗಲೂರು ಅಧ್ಯಕ್ಷ ಎ. ಜನಾರ್ದನ, ನಿರ್ದೇಶಕ ಪುಂಡಲೀಕ ಸುವರ್ಣ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು, ಕೋಶಾಧಿಕಾರಿ ಸಂತೋಷ್ ಕುಮಾರ್, ಕುಂದಾಪುರ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ನಾರಾಯಣ ಆಚಾರ್ಯ, ಬ್ರಹ್ಮಾವರ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಕಾರ್ಕಳ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಶಂಕರ್ ಶೆಟ್ಟಿಗಾರ್, ಬೈಂದೂರು ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕೃಷ್ಣಯ್ಯ ಮದ್ದೋಡಿ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ರಾಜೇಶ್ ಎಸ್. ಜತ್ತನ್, ನಿರ್ದೇಶಕರಾದ ಉದಯಕಿರಣ್ ಮಣಿಪಾಲ, ಎಸ್.ಜಿ. ಕೃಷ್ಣ ಕಟಪಾಡಿ, ವಿನಯ ಕುಮಾರ್ ಕಲ್ಮಾಡಿ, ಸಂದೀಪ್ ಪಡುಬಿದ್ರಿ, ಪುಟ್ಟಣ್ಣ ಭಟ್ ಹೆಬ್ರಿ, ಅರುಣ್ ಶೆಟ್ಟಿಗಾರ್ ಅಜೆಕಾರು, ಸುನಿಲ್ ಪೂಜಾರಿ ನಿಟ್ಟೆ, ರವಿ ಶೆಟ್ಟಿಗಾರ್ ಮಣಿಪಾಲ, ಸುಧಾಕರ್ ಶೆಟ್ಟಿ ಪರ್ಕಳ, ಶ್ರೀಲತಾ ಮಲ್ಪೆ, ಜ್ಯೋತಿ ಕೆ. ಉದ್ಯಾವರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.