ಕುಂದಾಪುರ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜು, ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿಯವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯವರು ಅಕ್ಟೋಬರ್ ತಿಂಗಳಿನಲ್ಲಿ “ಸೈಬರ್ ಸುರಕ್ಷತಾ ಜಾಗೃತಿ” ಬಗ್ಗೆ ಆಯೋಜಿಸಿದ MEMES ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು, ಪಿಯು ಕಾಲೇಜು ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.


















