ಉಡುಪಿ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಪಾವಂಜೆ ನಾಗವೃಜ ಕ್ಷೇತ್ರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರಿಂದ “ಶ್ರೀ ದೇವಿ ಮಹಾತ್ಮೆ” ಎಂಬ ಪ್ರಸಂಗದ ಪೌರಾಣಿಕ ಯಕ್ಷಗಾನ ಪ್ರದರ್ಶನ ಇಂದು (ನ.3) ಸಂಜೆ 6.30ಕ್ಕೆ ಪರ್ಕಳ ಮಹಾಲಿಂಗೇಶ್ವರ ಮಹಾಗಣಪತಿ ಮಹಿಷಮರ್ದಿನಿ ಅಯ್ಯಪ್ಪ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಉಡುಪಿ ಘಟಕ, ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಕಲಾ ಮಂಡಳಿ ಹಾಗೂ ಪರ್ಕಳ ವಾಲಿಬಾಲ್ ಫ್ರೆಂಡ್ಸ್ ನ ಸಹಯೋಗದಲ್ಲಿ ಈ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಸಂಜೆ 7 ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ.


















