ಉಡುಪಿ: ಭಾರತದ ವನಿತೆಯರ ಕ್ರಿಕೆಟ್ ತಂಡ ವಿಶ್ವಕಪ್ ಜಯಿಸಿರುವ ಪ್ರಯುಕ್ತ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಜಹಾಂಗೀರ್ ಭಟ್ ಉಡುಪಿ ಸ್ವೀಟ್ಸ್ ಹೌಸ್ ಸಹಯೋಗದಲ್ಲಿ ನಗರದ ಸಿಟಿ ಬಸ್ಸ್ ನಿಲ್ದಾಣದ ಬಳಿ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಉಡುಪಿ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಪೂರ್ಣಿಮಾ ಅವರು, ಹೆಣ್ಣು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆ ಹಾಗು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಿದಾಗ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ಒಳಕಾಡು ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬಂದು ಸಾಧನೆ ಮಾಡಬೇಕು ಎನ್ನುವ ಉದ್ದೇಶದಿಂದ, ಮಹಿಳೆಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜಿರುವುದಾಗಿ ಹೇಳಿದರು.
ಈ ಸಂದರ್ಭ ಸಿಹಿ ಖಾದ್ಯತಜ್ಞರು ಸ್ಥಳದಲ್ಲಿಯೇ ತಯಾರಿಸಲಾದ ಜಿಲೇಬಿಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿ ಎಂ ಶ್ರೀನಾಗೇಶ್ ಹೆಗ್ಡೆ, ಕೆ.ಬಾಲಗಂಗಾಧರ ರಾವ್, ಸಮಾಜಸೇವಕಿ ಸುದ್ದಿ ವಾಹಿನಿಯ ನಿರೂಪಕಿ ಅನಿತಾ, ಸುದ್ದಿ ವಾಚಕಿ ನಿಖಿತಾ, ಕಾಲೇಜು ವಿದ್ಯಾರ್ಥಿನಿಯರು, ಕ್ರೀಡಾಪಟುಗಳು ಭಾಗವಹಿಸಿದ್ದರು.


















