ಉಡುಪಿ:ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ


ಉಡುಪಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025 ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್‌ಲೈನ್ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ ವೀಕ್ಷಿಸಿ) ನಲ್ಲಿ ಕೂಡ ಶೇ.50 ರ ರಿಯಾಯಿತಿ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಬೇಕೆಂಬುದು ಕನ್ನಡ ಪುಸ್ತಕ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.