ಮಂಗಳೂರು: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕ ನೂಜಿಬಾಳ್ತಿಲ ಗ್ರಾಮದ ನಿವಾಸಿ ಲೋಕೇಶ್ ಅವರ 14 ವರ್ಷದ ಪುತ್ರ ಗಗನ್.
ಬಾಲಕ ಗಗನ್ ಎಂದಿನಂತೆ ಶಾಲೆಗೆ ತೆರಳಿ, ಗುರುವಾರ ಸಂಜೆ ಮನೆಗೆ ವಾಪಸಾಗಿದ್ದ. ಮನೆಗೆ ಬಂದ ನಂತರ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


















