ಉಡುಪಿ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ-1 ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತರಾಗಿರುವ ಪತ್ರಾಂಕಿತಅಧಿಕಾರಿಗಳಾಗಿರಬೇಕು ಮತ್ತು ಸಂಸ್ಥೆಗಳಲ್ಲಿ ಕನಿಷ್ಟ 2 ವರ್ಷ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ/ ಡಿಸಿಪಿಒ ಆಗಿ ಕನಿಷ್ಟ 1 ವರ್ಷ ಸೇವೆ ಸಲ್ಲಿಸಿದ ಅನುಭವವಿರಬೇಕು. ಗುತ್ತಿಗೆ ನೇಮಕಾತಿ ಸಿಬ್ಬಂದಿಗಳ ಸೇವಾವಧಿ ಗರಿಷ್ಟ ವಯೋಮಿತಿ 65 ವರ್ಷಗಳಾಗಿದ್ದು, ಸದರಿ ಅಭ್ಯರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಅರ್ಜಿಯನ್ನು ಅಕ್ಟೋಬರ್ 21 ರಿಂದ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 29 ರ ಒಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0820-2574964 ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.