ಉಡುಪಿ:ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ “ಖೇಲೋ ಕ್ರಿಯೇಟಿವ್” ಕ್ರೀಡಾಕೂಟ.

ಉಡುಪಿ -ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ, ಶೈಕ್ಷಣಿಕ ಸಹಭಾಗಿತ್ವದ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ “ಖೇಲೋ ಕ್ರಿಯೇಟಿವ್” ಕ್ರೀಡಾಕೂಟ ನಡೆಸಲಾಯಿತು.

ಸಭಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ, ಟಿ. ಎಂ. ಎ. ಪೈ. ಶಾಲೆಯ ಮುಖ್ಯೋಪಾಧ್ಯಾಯರಾದ,ಎಚ್.ಎನ್ ವೆಂಕಟೇಶ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ, ಕ್ರೀಡಾಕೂಟಕ್ಕೆ ಶುಭಹಾರೈಸಿದರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಆದರ್ಶ ಎಂ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂಧರ್ಭದಲ್ಲಿ ಮತ್ತೋರ್ವ ಅಥಿತಿಗಳಾದ ಕಾರ್ತಿಕ್ ಭಂಡಾರಿ, ಉಪ ಪ್ರಾಂಶುಪಾಲರಾದ ಜೋಯೆಲ್ ಮನೋಜ್ ಫರ್ನಾಂಡಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರಾಮಕೃಷ್ಣ ಹೆಗಡೆ ಸರ್ವರನ್ನು ಸ್ವಾಗತಿಸಿದರು. ಹಿಂದಿ ಉಪನ್ಯಾಸಕ ಮಂಜುನಾಥ್ ಕೆ.ವಿ. ವಂದಿಸಿದರು.

ಸಭಾ ಕಾರ್ಯಕ್ರಮದ ನಂತರ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಆದರ್ಶ ಎಂ. ಕೆ. ವಿಧ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿಯನ್ನು ತುಂಬುವುದರ ಜೊತೆಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದರು. ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಸಂದರ್ಭದಲ್ಲಿ ಹಾಜರಿದ್ದರು.