ಉಡುಪಿ: ನ.15ರಂದು ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರ ಅಭಿನಂದನಾ ಸಮಾರಂಭ

ಉಡುಪಿ: ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ನ.15ರಂದು ಸಂಜೆ 4ಗಂಟೆಗೆ ನಗರದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸ್ವಾಗತ ಸಮಿತಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ಅಧ್ಯಕ್ಷತೆಯನ್ನು ಎಂಜಿಎಂ ಕಾಲೇಜಿನ ವಿಶ್ವಸ್ಥ ಮಂಡಳಿ ಅಧ್ಯಕ್ಷ ಟಿ. ಸತೀಶ್ ಯು ಪೈ ವಹಿಸಲಿದ್ದಾರೆ. ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಅವರು ರಾಜೇಶ್ ಪ್ರಸಾದ್ ಅವರನ್ನು ಸನ್ಮಾನಿಸಿ ಅಭಿನಂದಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನಿಲ್ ಕುಮಾರ್, ಯಶ್ ಪಾಲ್ ಸುವರ್ಣ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಂಜಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ, ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ. ನಾಯ್ಕ್ ಚಾಂತಾರು, ವಿನಯ್ ಚೇರ್ಕಾಡಿ ಇದ್ದರು.