ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಅವರಿಗೆ “ಸಹಕಾರ ರತ್ನ” ಪ್ರಶಸ್ತಿ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ವತಿಯಿಂದ ನೀಡಲ್ಪಡುವ ಪ್ರತಿಷ್ಠಿತ “ಸಹಕಾರ ರತ್ನ” ಪ್ರಶಸ್ತಿಗೆ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಅವರು ಭಾಜನರಾಗಿದ್ದು, ನಾಳೆ (ನ.14) ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್ ಬಳಿಯ ಗಾಯಿತ್ರಿ ವಿಹಾರ್ ನಲ್ಲಿ‌ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರಗ ಪೂಜಾರಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕೊರಗ ಪೂಜಾರಿ ಅವರು ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆಗೆ ಈ ಪ್ರಶಸ್ತಿ ಒಲಿದು ಬಂದಿದೆ. ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಡಳಿತ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.