ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು- ಸಂಸದ ಕೋಟ

ಉಡುಪಿ: ವ್ಯಕ್ತಿಗೆ ಎಷ್ಟೇ ಸನ್ಮಾನಗಳು, ಗೌರವಗಳು ಸಿಕ್ಕಿದರೂ ಹುಟ್ಟೂರಿನ ಸನ್ಮಾನ ಎಲ್ಲಕ್ಕಿಂತ ಮಿಗಿಲಾದುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅಭಿನಂದನಾ ಸ್ವಾಗತ ಸಮಿತಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಚಂಡೀಗಢ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಟ್ಟಕಡೆಯ ಸಮಾಜಕ್ಕೆ ಸೇರಿದ ವ್ಯಕ್ತಿಗಳು ಉನ್ನತ ಹುದ್ದೆಗೇರುವುದು ಸುಲಭದ ಮಾತಲ್ಲ. ಅಂತದ್ದರಲ್ಲಿ ಮರಾಠಿ ಸಮುದಾಯದ ರಾಜೇಶ್ ಪ್ರಸಾದ್ ಅವರು ಉನ್ನತ ಹುದ್ದೆಗೇರುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.ಈ ಸಂದರ್ಭದಲ್ಲಿ ರಾಜೇಶ್ ಪ್ರಸಾದ್ ಹಾಗೂ ಉಷಾ ದಂಪತಿಗೆ ಸನ್ಮಾನ ಮಾಡಲಾಯಿತು.

ಎಂಜಿಎಂ ಕಾಲೇಜಿನ ವಿಶ್ವಸ್ಥ ಮಂಡಳಿ ಅಧ್ಯಕ್ಷ ಟಿ.ಸತೀಶ್‌ ಯು. ಪೈ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್, ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್‌ನ ಪಟ್ಲ ಸತೀಶ್ ಶೆಟ್ಟಿ, ಎಂಜಿಎಂ ಕಾಲೇಜು ಪ್ರಾಂಶುಪಾಲೆ ವನಿತಾ ಮಯ್ಯ, ಸಂಧ್ಯಾ ಕಾಲೇಜು ಪ್ರಾಂಶುಪಾಲ ದೇವಿದಾಸ್ ಎಸ್‌. ನಾಯ್ಕ, ಶ್ರೀಧರ್ ಆರ್. ಪೈ, ಎಂ. ವಿಶ್ವನಾಥ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕುಯಿಲಾಡಿ ಸುರೇಶ್ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು.