ಕುಂದಾಪುರ: ಭಾರತ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ಎಂಟನೇ ತರಗತಿ ವಿದ್ಯಾರ್ಥಿಯಾದ ವಿನೀಶ್ ಆಚಾರ್ಯ ಮತ್ತು ಆರನೇ ತರಗತಿಯ ವಿದ್ಯಾರ್ಥಿನಿಯಾದ ಪ್ರಣಮ್ಯ ಆಚಾರ್ಯ ಹಾಗೂ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾದ ಸಾನಿಧ್ಯ ಆಚಾರ್ಯ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೆಚ್ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿಯವರು ಅಭಿನಂದಿಸಿದ್ದಾರೆ.


















