ಮಂಗಳೂರು: ಕರಾವಳಿ ಉತ್ಸವ ಕ್ರೀಡಾಂಗಣದಲ್ಲಿ ಜರುಗಿದ
ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಇವರಿಂದ ವಜ್ರಮಹೋತ್ಸವ ಪೂರೈಸಿದ ಸಹಕಾರಿ ಸಂಘ ವಿಶೇಷ ಪ್ರಶಸ್ತಿಯನ್ನು ಎಸ್.ಕೆ.ಗೋಲ್ಡ್ ಸ್ಮಿತ್ ಸೊಸೈಟಿ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಸ್ವೀಕರಿಸಿದರು.


ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್ ಕುಮಾರ್
ಬೊಟ್ಯಾಡಿ, ನಬಾರ್ಡ್ ಮುಖ್ಯ ಪ್ರಬಂಧಕ ಡಾ.ಸುರೇಂದ್ರ ಬಾಬು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್ ನವೀನ್, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ. ಕುಮಾರ್, ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ., ಉಪನಿಬಂಧಕ ಎಚ್.ಎನ್. ರಮೇಶ್, ಪ್ರಮುಖರಾದ ಲಾವಣ್ಯ ಕೆ.ಆರ್, ಕೆ.ಎಂ.ಎಫ್ನ ಅಧ್ಯಕ್ಷ ರವಿರಾಜ್ ಹೆಗ್ಡೆ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಪ್ರಮುಖರಾದ ಮೋನಪ್ಪ ಶೆಟ್ಟಿ ಎಕ್ಕಾರು, ಶಶಿಕುಮಾರ್ ರೈ ಬಾಲ್ಯೊಟ್ಟು, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಾಸಕ ಯಶ್ಪಾಲ್ ಎ. ಸುವರ್ಣ, ಬಿ.ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.


















