ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ ನ.18: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕುಜೆ ಗಾಮದ ಈಸರ್ಮಾರ್ ನಿವಾಸಿ ಸೂರ್ಯ (52) ಎನ್ನುವ ವ್ಯಕ್ತಿಯು ನ.10 ರಂದು ಪೆರ್ಡೂರಿನಲ್ಲಿರುವ ತನ್ನ ತಂಗಿ ಮನೆಗೆ ತೆರಳಿದ್ದು ಬಳಿಕ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಉಪ ನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.