ಉಡುಪಿ : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 24 ರಿಂದ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗೃತ ಕ್ರಮ ವಹಿಸುವ ಸಲುವಾಗಿ ಈ ಕೆಳಗಿನಂತೆ ಸೂಚನೆಗಳನ್ನು ನೀಡಿರುತ್ತದೆ.
ಸಾರ್ವಜನಿಕರು/ ಮೀನುಗಾರರು / ನದಿ ತೀರ / ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು. ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು. ತಗ್ಗು ಪ್ರದೇಶ/ ಕೆರೆ/ ನದಿ ತೀರ/ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸುವಂತೆ ಹಾಗೂ ತುರ್ತು ಸೇವೆಗೆ ಟೋಲ್ ಫ್ರೀ ನಂ: 1077, ದೂರವಾಣಿ ಸಂಖ್ಯೆ: 0820-2574802 / 2574360 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.