ಬಂಟ್ವಾಳ: ಸ್ಕೂಟರಿಗೆ ಕಾರು ಢಿಕ್ಕಿ; ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ.

ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ.

ಗಾಯಾಳು ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.