ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ.
ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್ (31) ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಂದು (73) ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬೈಂದೂರು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















