ನ.23ರಂದು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್‌ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಉದ್ಘಾಟನೆ ಕಾರ್ಯಕ್ರಮ ನ.23ರಂದು ಬೆಳಿಗ್ಗೆ 6.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಗುರುರಾಜ್ ಕೆ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಾಸಕ ಯಶ್ ಪಾಲ್ ಸುವರ್ಣ ಅವರು ನೂತನ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್‌ ಅನ್ನು ಉದ್ಘಾಟಿಸಲಿದ್ದಾರೆ. ಬಳಿಕ ಸೈಕ್ಲೋಥಾನ್ ಆರಂಭವಾಗಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳು, ಅಮೆಚೂರ್ ಸೈಕ್ಲಿಸ್ಟ್ ಗಳು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಖಜಾಂಚಿ ದೀಪಕ್ ಕುಮಾರ್ ವೈ., ಉಪಾಧ್ಯಕ್ಷ ಡಾ. ಸಯ್ಯದ್ ಮುಸ್ತಾಫ, ಸೈಕ್ಲಿಸ್ಟ್‌ ಗಳಾದ ಮಾಕ್ಸಿಮ್ ಸಲ್ದಾನ್ಹಾ, ಆನಿಯಲ್ ಸಲ್ದಾನ್ಹಾ ಇದ್ದರು.