ಉಡುಪಿ: ನಾಗರಾಜ್ ರಾವ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ.

ಉಡುಪಿ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ‌ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ‌ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಆದ ನಾಗರಾಜ್ ರಾವ್ ಇವರು ಮಂಗಳೂರಿನ ಎ ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪ್ರಾಂಶುಪಾಲರಾದ ಡಾ. ಶಾಂತರಾಮ್ ರೈ ಸಿ, ಇವರ
ಮಾರ್ಗದರ್ಶನದಲ್ಲಿ ಮಂಡಿಸಿದ “ಪರ್ಫಾಮೆನ್ಸ್ ಎನ್‌ಹ್ಯಾನ್ಸ್ಮೆಂಟ್ ಆಫ್ ಎ ಸ್ಪೆಸಲ್ ಮೆಶಿನ್ ಯೂಸಿಂಗ್ ಸಾಫ್ಟ್ ಕಂಪ್ಯೂಟಿಂಗ್ ಟೆಕ್ನಿಕ್ಸ್ ಅಂಡರ್ ಪ್ಯಾರಾಮೆಟ್ರಿಕ್ ಅನ್‌ಸರ್‌ನಿಟಿ” ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಇವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.