ಉಡುಪಿ:ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದಾಗ ಯೋಜನೆ ಫಲಪ್ರದ : ಅಶೋಕ್ ಕುಮಾರ್ ಕೊಡವೂರು

ಉಡುಪಿ: ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಜನಸಾಮಾನ್ಯರಿಗೆತಲುಪಿದಾಗ ಮಾತ್ರ ಆ ಯೋಜನೆಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಸರಕಾರದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದುಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಸಂವಿಧಾನದ ಆಶಯದಂತೆ ದೇಶದ ಜನಸಾಮಾನ್ಯರಿಗೆ ಸಮಾನತೆಯನ್ನು ಕಲ್ಪಿಸುವ ದೃಷ್ಠಿಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ,ಜಾರಿಗೆ ತರಲಾಗಿದೆ. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡಿದೆ ಎಂದ ಅವರು, ಜಿಲ್ಲೆಯ ಅರ್ಹ ಪ್ರತಿಯೊಬ್ಬರಿಗೂಯೋಜನೆಯನ್ನು ತಲುಪಿಸುವ ಉದ್ದೇಶದಿಂದ ಕಲಾಜಾಥದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸರಕಾರ ಜಾರಿಗೆ ಬಂದಾಗಿನಿಂದ ಈವರೆಗೆ ಸುಮಾರು ಎರಡೂವರೆ ವರ್ಷಗಳ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯಅರ್ಹ ಫಲಾನುಭವಿಗಳ ಖಾತೆಗೆ 2,500 ಕೋಟಿ ರೂ.ಗಳನ್ನು ಯಾವುದೇ ಮಧ್ಯವರ್ತಿಯ ಹಾವಳಿ ಇಲ್ಲದೇ ನೇರವಾಗಿ ಜಮಾ ಮಾಡಲಾಗಿದೆ ಎಂದರು.

ಕೊರೋನಾ ನಂತರ ಜೀವನ ಸಾಗಿಸಲು ಕಷ್ಟಸಾಧ್ಯ ಎನ್ನುವಂತಹ ಪರಿಸ್ಥಿತಿಯಲ್ಲಿದ್ದ ರಾಜ್ಯದ ಮಹಿಳೆಯರಿಗೆ ಗೃಹಜ್ಯೋತಿ ಯೋಜನೆಯು ಆರ್ಥಿಕ ಬಲ ನೀಡುವುದರೊಂದಿಗೆ ಸ್ವಾವಲಂಭಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದ ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಸುಮಾರು 55,000 ಕೋಟಿ ರೂ.ಗಳು ನೇರವಾಗಿ ಫಲಾನುಭವಿಗಳಿಗೆ ತಲುಪುವುದರೊಂದಿಗೆ ಬಡವರ, ಮಧ್ಯಮ ವರ್ಗದವರ ಬದುಕಿಗೆಯೋಜನೆಗಳು ಆಶಾಕಿರಣವಾಗಿದೆ ಎಂದರು.

ಯುವಜನರು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಕೆಲವುಗ್ರಾಮೀಣ ಭಾಗದ ಪ್ರದೇಶಗಳಿಗೆ ಸಾರಿಗೆ ಬಸ್‌ಗಳು ಸಂಚರಿಸುತ್ತಿಲ್ಲ ಎಂಬ ದೂರುಗಳು ಪದೇ ಪದೇ ಕೇಳಿಬರುತ್ತಿದೆ. ಮಹಿಳೆಯರಿಗೆ ಹಾಗೂವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಪರ್ಕ ಇಲ್ಲದೇ ಇರುವ ಕಡೆಗಳಲ್ಲಿ ಎಲೆಕ್ಟಿçಕಲ್ ಬಸ್‌ಗಳನ್ನು ಸಂಚರಿಸುವಂತೆ ಅವುಗಳನ್ನು ಮಹಿಳೆಯರೇ ಚಲಾಯಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕು. ಶಕ್ತಿಯೋಜನೆಯಡಿ ಹೆಣ್ಣು ಮಕ್ಕಳು ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಉಚಿತವಾಗಿ ಸಂಚರಿಸುವಾಗ ಅಗತ್ಯವಿದ್ದಾಗ ಮಾತ್ರ ಬಳಸಬೇಕು. ಈ ಎಲ್ಲಾಯೋಜನೆಗಳು ಬಡಜನರಿಗೆ ವರವಾಗಿದ್ದು, ತಳಮಟ್ಟದ ಪ್ರತಿಯೊಬ್ಬರಿಗೂ ತಲುಪಬೇಕು ಎಂದರು.

ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ ಮಾತನಾಡಿ, ರಾಜ್ಯದ ಮಹಿಳೆಯರು ಒಂದಲ್ಲಾ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಯು ಅವರುಗಳ ಬದುಕಿಗೆ ದಾರಿದೀಪವಾಗಿದೆ.ಗ್ಯಾರಂಟಿ ಯೋಜನೆಯೊಂದಿಗೆ ಪೊಲೀಸರಿಂದ ತರಬೇತಿ ಪಡೆದ ಮಹಿಳೆಯರಿಂದಲೇ ರೂಪಿಸಲಾದ ಅಕ್ಕ ಪಡೆಯು ಸಂಕಷ್ಟದಲ್ಲಿರುವಮಹಿಳೆಯರಿಗೆ ಪಾಲಿಗೆ ವರದಾನವಾಗಲಿದೆ ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಏಳು ಕೋಟಿ ಜನರ ಬದುಕಿಗೆ ಆಸರೆಯಾಗಿ, ಸ್ವಾವಲಂಭಿ ಜೀವನ ನಡೆಸಲು ಅನುವು ಮಾಡಿಕೊಟ್ಟಿದೆ. ಈ ಯೋಜನೆಯು ಮತ್ತಷ್ಟುಪರಿಣಾಮಕಾರಿಯಾಗಿ ತಲುಪುವುದರೊಂದಿಗೆ ಸಮಾಜದ ಕಟ್ಟಕಡೆಯ ಗ್ರಾಮೀಣ ಭಾಗಕ್ಕೂ ತಲುಪಿಸುವ ಉದ್ದೇಶದಿಂದ ಕಲಾಜಾಥಾ ಪ್ರಚಾರಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ,ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತುಹಾಗೂ ಶ್ರೀ ಮಾರುತಿ ಕಲಾಸಂಘ ತೊಗಲು ಗೊಂಬೆ ಕಲಾ ತಂಡದವರು ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ತೊಗಲು ಗೊಂಬೆಯಾಟ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಮೇಶ್ ಕಾಂಚನ್, ಸದಸ್ಯರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಸೋಜನ್ ಕೆ.ಜಿ, ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ. ನಿಕೇತನ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಲಾಜಾಥಾ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ.