ಹೆಬ್ರಿ: ಭಾರತ ಸರ್ಕಾರದ ಇಂಧನ ಸಚಿವಾಲಯ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ಎಂಟನೇ ತರಗತಿ ವಿದ್ಯಾರ್ಥಿಯಾದ ವಿನೀಶ್ ಆಚಾರ್ಯ ವಿಜೇತರಾಗಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹೆಚ್ ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿಯವರು ಅಭಿನಂದಿಸಿದ್ದಾರೆ.


















