ಉಡುಪಿ:ಇನ್ಕ್ಯುಬೇಷನ್ ಅವೇರ್‌ನೆಸ್ – ಮಾಹಿತಿ ಕಾರ್ಯಾಗಾರ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂ.ಎಸ್.ಎಂ.ಇ) ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ಅವುಗಳ ಕಾರ್ಯ ಚಟುವಟಿಕೆಗಳನ್ನು ವೇಗಗೊಳಿಸಲು ಕೇಂದ್ರ ಸರ್ಕಾರದ Raising and Accelerating MSME performance (RAMP) ಯೋಜನೆಯಡಿ ಒಂದು ದಿನದ ಇನ್ಕುö್ಯಬೇಷನ್ ಅವೇರ್‌ನೆಸ್‌ಗೆ ಸಂಬಂಧಿಸಿದಂತೆ ಮಾಹಿತಿ ಕಾರ್ಯಾಗಾರವನ್ನು ಡಿಸೆಂಬರ್ 3 ರಂದು ಕಾರ್ಕಳ ತಾಲೂಕು ನಿಟ್ಟೆಯ ಎನ್.ಎಂ.ಎ.ಎಮ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್.ಎಂ.ಎ.ಎಮ್.ಐ.ಟಿ) ಇಲ್ಲಿ ಆಯೋಜಿಸಲಾಗಿದೆ.

ಸದರಿ ಕಾರ್ಯಕ್ರಮದಲ್ಲಿ ಪ್ರತಿಷ್ಟಿತ ಸಂಸ್ಥೆಯಿಂದ ಆಗಮಿಸಿದ ಪರಿಣಿತ ಭೋಧಕರು ಎಂ.ಎಸ್.ಎಂ.ಇ ಉದ್ಯಮಶೀಲರಿಗೆ ಉಪಯುಕ್ತ
ಮಾಹಿತಿಯನ್ನು ನೀಡಲಿದ್ದು, ನೋಂದಾಯಿತ ಎಂ.ಎಸ್.ಎಂ.ಇ ಉದ್ಯಮಶೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಾಗಾರದ
ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಪ್ರಟಕಣೆ ತಿಳಿಸಿದೆ.