ಉಡುಪಿ:ಡಿ.10 ರಂದು ಉದ್ಯಮಶೀಲರಿಗೆ ಮಾಹಿತಿ ಕಾರ್ಯಾಗಾರ

ಉಡುಪಿ: ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂ.ಎಸ್.ಎಂ.ಇ) ಗಳ ಕಾರ್ಯಕ್ಷಮತೆಯನ್ನು
ಹೆಚ್ಚಿಸಲು ಹಾಗೂ ಅವುಗಳ ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಲು ಭಾರತ ಸರ್ಕಾರದ Raising and Accelerating MSME performance (RAMP) ಯೋಜನೆಯಡಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಕರ್ನಾಟಕ ತಾಂತ್ರಿಕ
ಉನ್ನತೀಕರಣ ಪರಿಷತ್, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಜಿಲ್ಲಾ ಸಣ್ಣ
ಕೈಗಾರಿಕಾ ಸಂಘದ ಸಹಯೋಗದಲ್ಲಿ ZED & LEAN Awareness ಗೆ ಸಂಬಂಧಿಸಿದಂತೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು
ಡಿಸೆಂಬರ್ 10 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಹೋಟೆಲ್ ಚಿತ್ತಾರ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ
ಪ್ರತಿಷ್ಟಿತ ಸಂಸ್ಥೆಯಿಂದ ಆಗಮಿಸಿದ ಪರಿಣಿತ ಭೋಧಕರು ಎಂ.ಎಸ್.ಎಂ.ಇ ಉದ್ಯಮಶೀಲರಿಗೆ ಉಪಯುಕ್ತ ಮಾಹಿತಿ ನೀಡಲಿದ್ದಾರೆ.

ನೋಂದಾಯಿತ ಎಂ.ಎಸ್.ಎಂ.ಇ ಉದ್ಯಮಶೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಾಗಾರದ ಸದುಪಯೋಗ
ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ದೂರವಾಣಿ ಸಂಖ್ಯೆ: 0820-2575650 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.