ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲ್ಪಡುವ ‘ಶಾರದಾ ಕೃಷ್ಣ’ ಪ್ರಶಸ್ತಿಗೆ ಕಿರುತೆರೆ ನಟ, ರಂಗನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ. ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಪ್ರಶಸ್ತಿಯು 50 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಫಲಕವನ್ನು ಒಳಗೊಂಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷೆ ಡಾ. ಭಾರ್ಗವಿ ಐತಾಳ್, ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಸದಸ್ಯ ವಾಸುದೇವ ಅಡಿಗೆ ಇದ್ದರು.


















