ಉಡುಪಿ:ಶಿಕ್ಷಕರ ಅರ್ಹತಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆ.ಎ.ಆರ್.ಟಿ.ಇ.ಟಿ) ಯು ಡಿಸೆಂಬರ್ 7 ರಂದು ಜಿಲ್ಲೆಯ 16
ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ನಡೆಯಲಿದೆ.

ಸದರಿ ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾದಂಡಾಧಿಕಾರಿಯೂ ಆಗಿರುವ
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.