ಬ್ರಹ್ಮಾವರ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಕೋಟೆಯ ನಡುಹಿತ್ಲು ನಿವಾಸಿ ಶ್ರೇಯಾ(21) ಎಂಬವರಿಗೆ ನ.24ರಂದು ಟೆಲಿಗ್ರಾಂ ಖಾತೆಗೆ ಅಪರಿಚಿತ ವ್ಯಕ್ತಿಯೊಬ್ಬ ಲಿಂಕ್ ಕಳುಹಿಸಿ, ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅದರಂತೆ ಶ್ರೇಯಾ ತನ್ನ ಖಾತೆಯಿಂದ ಆರೋಪಿ ತಿಳಿಸಿದ ಖಾತೆಗೆ ಒಟ್ಟು 1,05,000ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಆದರೆ ಆರೋಪಿ ಶ್ರೇಯಾ ಅವರಿಗೆ ಹಣ ನೀಡದೆ ವಂಚಿಸಿರುವುದಾಗಿ ದೂರಲಾಗಿದೆ.


















