ಶಿರ್ವ: ಬಂಟಕಲ್ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾಗಿ ನಾಗರಾಜ್ ಭಟ್ ಅಧಿಕಾರ ವಹಿಸಿಕೊಂಡರು.
ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮತ್ತು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾಕೃಷ್ಣ ಎಸ್ ಐತಾಳ್ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು. ಸುದರ್ಶನ್ ರಾವ್ ಅವರನ್ನು ಸಂಸ್ಥೆಯ ಶೈಕ್ಷಣಿಕ ಡೀನ್ ಆಗಿ ನೇಮಿಸಲಾಯಿತು.
ನಾಗರಾಜ್ ಭಟ್ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ, ಶೈಕ್ಷಣಿಕ ಡೀನ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

















