ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ.09 ರಂದು ನಡೆಯಿತು. ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನಲ್ ಟ್ರಸ್ಟ್ ಹಾಗೂ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ವಿಶೇಷವಾದ ಶಿಕ್ಷಣದ ಕಾಲಘಟ್ಟದಲ್ಲಿ ವಿದ್ಯಾರ್ಜನೆಗೈಯುತ್ತಿರುವ ವಿದ್ಯಾರ್ಥಿಗಳು ವಯೋಸಹಜ ವಾದ ಆಸೆ ಆಕಾಂಕ್ಷೆಗಳಿಗೆ ಕಡಿವಾಣ ಹಾಕಿ ತಂದೆ ತಾಯಿಯ ಶ್ರಮ ವನ್ನು ನೆನಪಿಸಿಕೊಂಡು ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನ ವಿರಲಿ ಎಂದರು. ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಬರಲ್ ಟ್ರಸ್ಟ್ ನ ಅಧ್ಯಕ್ಷ ರಾದ ಕೆ. ರಾಮಕೃಷ್ಣ ಕಾಮತ್ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ನರ್ಸರಿ ವಿಭಾಗದ ಮುಖ್ಯಸ್ಥ ರಾದ ಶ್ರೀಮತಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಬ್ರೆಂಡನ್ ಅತಿಥಿಯನ್ನು ಪರಿಚಯಿಸಿದರು. ಅದಿತಿ ವಂದಿಸಿ, ಫಾತಿಮಾ ತೈಭಾ ಸ್ವಾಗತಿಸಿ, ಕೆ. ಶ್ರೀನಿತಾ ಎಸ್. ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿದರು.















