ಕಾರ್ಕಳ: ಕಣಂಜಾರು ಮಡಿಬೆಟ್ಟು ಅಹಿಪ್ರಾ ಶಾಲೆಯಲ್ಲಿ ನೀರಿನ ಘಟಕವನ್ನು ಸ್ಥಾಪಿಸಲಾಯಿತು. ಶುದ್ಧ ಕುಡಿಯುವ ನೀರಿನ ಅಗತ್ಯವನ್ನು ಮನಗಂಡು ಸಮಾಜ ಸೇವಕ ಹಾಗೂ ಕೊಡುಗೈ ದಾನಿಯಾದ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಅರ್ಜುನ್ ಭಂಡಾರ್ಕರ್ ಅವರು ಹಸ್ತಾಂತರಿಸಿದರು.
ಈ ಕಾರ್ಯಕ್ರಮದಲ್ಲಿ ಪೆಲತ್ತೂರು ಫ್ರೆಂಡ್ಸ್ ಪೆಲತ್ತೂರು ಇದರ ಗೌರವಾಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸಿ ಎ ಚಂದನ್ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ ನ ಖಜಾಂಚಿ ಪ್ರಕಾಶ್ ಪ್ರಭು, ನಿವ್ರತ್ತ ಮುಖ್ಯ ಶಿಕ್ಷಕ ದಿನೇಶ್. ಯು. ಎಸ್, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು ಹಾಗೂ ಮುಖ್ಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರಾದ ಅಶ್ವತ್ಥ್ ಭಾರದ್ವಾಜ್ ಕೆ , ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
















