ಉಡುಪಿ:ಡಿ.29 ರಂದು ವಿಶ್ವ ಮಾನವ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟçಕವಿ ಕುವೆಂಪು ರವರ ಜಯಂತಿ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 29 ರಂದು‌ ಬೆಳಗ್ಗೆ 10 ಗಂಟೆಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಜನತಾ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ. ಸುನಿಲ್ ಕುಮಾರ್,
ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.
ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ, ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕಿ ಭಾಗೀರಥಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸದ್ದು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು ಉಪನ್ಯಾಸ ನೀಡಲಿದ್ದಾರೆ.