ಉಡುಪಿ:ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ: ಸುಮಾರು 8-9 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ನಿವಾಸಿ ವಿಠ್ಠಲ್ ಶೇಟ್ (63) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಕೊಂಕಣಿ, ಹಿಂದಿ, ಇಂಗ್ಲೀಷ್ ಹಾಗೂ ಮರಾಠಿ ಭಾಷೆ
ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ನಂ.100 (0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.