ಉಡುಪಿ: ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಮೈಸೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ಕನ್ನಡ ಬಾರದ ಸರ್ಕಾರಿ ನೌಕರರಿಗೆ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದ್ದು, ರಾಜ್ಯದಲ್ಲಿರುವ ನಗರಸಭೆ,
ಕ.ವಿ.ಪ್ರ.ನಿ.ನಿ, ಕೆ.ಎಸ್.ಆರ್.ಟಿ.ಸಿ, ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದಾಗಿದ್ದು, ಉತ್ತೀರ್ಣರಾದವರಿಗೆ ಕರ್ನಾಟಕ
ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕನ್ನಡ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.
ಈ ಯೋಜನೆಯನ್ನು ಸಾರ್ವಜನಿಕರಿಗೂ ಸಹ ವಿಸ್ತರಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 18 ರಿಂದ 50
ವರ್ಷದೊಳಗಿನ ಆಸಕ್ತ ಸಾರ್ವಜನಿಕರು ಭರ್ತಿ ಮಾಡಿದ ಅರ್ಜಿಯ ಜೊತೆಗೆ ರೂ.250 ಮೊತ್ತದ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಕಳುಹಿಸಬೇಕು.
ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಮೂವತ್ತೊಂಭತ್ತನೆಯ ತಂಡದ ತರಬೇತಿಯು ಜನವರಿಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐದು ರೂಪಾಯಿ ಅಂಚೆ ಚೀಟಿ ಸಹಿತ ಸ್ವ-ವಿಳಾಸ ಹೊಂದಿದ ಲಕೋಟೆಯನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು–570006, ದೂ.ಸಂಖ್ಯೆ: 0821-2345128 ಇವರಿಗೆ ಕಳುಹಿಸಬಹುದು ಎಂದು ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯ ಪ್ರಭಾರಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
















