ಕಾರ್ಕಳದ ವಿವಿಧ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ

ಕಾರ್ಕಳ: ವಿಧಾನಪರಿಷತ್ ಸದಸ್ಯ, ಶಾಸಕರಾದ ಮಂಜುನಾಥ ಭಂಡಾರಿ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಿವಪುರ, ನಡಪಾಲ್, ಮುದ್ರಾಡಿ,ವರಂಗ ನಿಟ್ಟೆ, ಕಲ್ಯಾ, ನಂದಳಿಕೆ ಹಾಗು ಬೆಳ್ಮಣ್ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಉದಯ್ ಶೆಟ್ಟಿ ಮುನಿಯಾಲು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶುಭೋಧ್ ರಾವ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೋಪಿನಾಥ್ ಭಟ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಪೆರ್ಡೂರು ಗ್ರಾಮ ಪಂಚಾಯಿತಿ ಸದಸ್ಯರಾದ ನವೀನ್ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.