ಮಂಗಳೂರು: ಉಕ್ಕಿನ ಮನುಷ್ಯ, ಸರ್ದಾರ್ ವಲ್ಲಭಭಾಯಿ ಪಟೇಲ್ ಇವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಿರುವ ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿಯಿಂದ ‘ಏಕತೆಗಾಗಿ ಓಟ’ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಇತರ ನಾಯಕರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.












