ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ.7.25ರ ಇತರೆ ಹಿಂದುಳಿದ
ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡಲು ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,
ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಜನವರಿ 16 ರ ಒಳಗಾಗಿ ನಗರಸಭೆ ಕಚೇರಿಗೆ ಸಲ್ಲಿಸುವಂತೆ ಉಡುಪಿ ನಗರಸಭೆ
ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
















